ಯುವ ಪೀಳಿಗೆಗೆ ವಿವೇಕಾನಂದರ ಸಿಂಹವಾಣಿ

ಏಳಿ! ಎದ್ದೇಳಿ ! ಗುರಿ ಮುಟ್ಟುವ ತನಕ ನಿಲ್ಲದಿರಿ’ ವಿಶ್ವದ ಅನೇಕ ಮಂದಿ ಇಂದು ಭಾರತ ಸಂಸ್ಕೃತಿ, ಹಿಂದೂ ಪರಂಪರೆಯ ಬಗ್ಗೆ ಗೌರವದಿಂದ ಕಾಣಲು ಹಾಗೂ ಅದರ ಬಗ್ಗೆ ಅಧ್ಯಯನ ಮಾಡಲು ಮುಂದಾಗುತ್ತಿರುವುದಕ್ಕೆ ಕಾರಣ ಕೂಡ ಅದೇ ವಿವೇಕವಾಣಿ! ಇಂದು ವಿವೇಕವಾಣಿಯ ಒಂದಿಷ್ಟು ಅಂಶ ನಮ್ಮ ಯುವ ಪೀಳಿಗೆಯ ತಲೆ ಒಳಗೆ ಹೊಕ್ಕರೆ, ಭಾರತೀಯ ಸಂಸ್ಕೃತಿಯ ಉಳಿಸಿ, ಬೆಳಸಲು ಸಾಧ್ಯವಾಗುತ್ತದೆ.
ಸ್ವಾಮಿ ವಿವೇಕಾನಂದರು ತಮ್ಮ ಶಕ್ತಿಯುತ ವ್ಯಕ್ತಿತ್ವದ ಮೂಲಕ, ಅಪೂರ್ವ ವಾಗ್ಮೀಯತೆ ಹಾಗೂ ಪ್ರಚೋದನಾತ್ಮಕ ಬರವಣಿಗೆ ಮೂಲಕ ನಮ್ಮ ರಾಷ್ಟ್ರ ಚೇತವನ್ನು ಜಾಗೃತಗೊಳಿಸಿ, ಯುವಕರಲ್ಲಿ ನವೋತ್ಸಾಹವನ್ನು ಕೆರಳಿಸಿ, ಅವರಲ್ಲಿ ನಮ್ಮ ಸಂಸ್ಕೃತಿಯ ಬಗ್ಗೆ ಹೆಮ್ಮೆಯನ್ನು ಕುದುರಿಸಿ ಸ್ವತಂತ್ರ ನವ ಭಾರತ ನಿರ್ಮಾಣಕ್ಕೆ ಬುನಾದಿಯನ್ನು ಹಾಕಿದರು.
