ಮೂಡಿಗೆರೆ ಮಾಯಾವಿ ತೇಜಸ್ವಿನಾಡಿನಲ್ಲಿ ಚಾರಣ

ಮೂಡಿಗೆರೆ ಎಂಬ ಮಾಯಾಲೋಕದಲ್ಲಿ ಈಗ್ಗೆ ಎರಡು ವರ್ಷಗಳ ಹಿಂದೆ ತೇಜಸ್ವಿ ಎಂಬ ಚೇತನ ನಮ್ಮನ್ನು ಅಗಲಿ ಮರೆಯಾಯಿತು. ದೈಹಿಕವಾಗಿ ಏಕ ರೂಪದಲ್ಲಿ ಕಾಣುತ್ತಿದ್ದ ವ್ಯಕ್ತಿ. ಪ್ರಕೃತಿಯನ್ನು ಆರಾಧಿಸುತ್ತಾ ಅದರೊಡನೆ ಲೀನವಾದ ಮೇಲೆ, ಪ್ರಕೃತಿಯ ಎಲ್ಲಾ ವಿಸ್ಮಯರೂಪದಲ್ಲೂ ಕಾಣತೊಡಗಿದ್ದಾರೆ. ಈಗ ಮಲೆನಾಡಿನ ಅಥವಾ ಬಹುಶಃ ಕರ್ನಾಟಕದ ಗಿಡ ಮರ, ಪ್ರಾಣಿ ಪಕ್ಷಿ, ಜನ ಮನಗಳಲ್ಲಿ ಸದ್ದಿಲ್ಲದಂತೆ ಬೆರೆತಿದ್ದಾರೆ.
ತೇಜಸ್ವಿ ಎಂಬ ಧನಾತ್ಮಕ ಶಕ್ತಿ ಎಲ್ಲರನ್ನು ಬೆರೆಯಲಿ, ಅವರ ಬದುಕು ಬರಹ ಚಿಂತನೆಗಳು ಇಂದಿನ ಹಾಗೂ ಮುಂದಿನ ಪೀಳಿಗೆಗೆ ಅರ್ಥವಾಗಲಿ, ಅವರ ಕನಸಿನ ಹಾದಿಯಲ್ಲಿ ಕ್ರಮಿಸುವ ಭಾಗ್ಯ ಎಲ್ಲರಿಗೂ ಸಿಗಲಿ ಎಂಬ ಆಶಯದೊಂದಿಗೆ ಮೂಡಿಗೆರೆಯ ವಿಸ್ಮಯ ಪ್ರತಿಷ್ಠಾನವು ಎತ್ತಿನಭುಜ ಚಾರಣ ಸೇರಿದಂತೆ ಕೆಲ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿತ್ತು. Read more
