ರಾಜ್ಯಸಭೆಯ ಚುನಾವಣೆ 2020:ಒಟ್ಟು ಸ್ಥಾನ, ರಾಜ್ಯವಾರು ಪೂರ್ಣ ವಿವರ

ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ದೇಶದೆಲ್ಲೆಡೆ ಲಾಕ್ ಡೌನ್ ಮುಂದುವರೆಸಲಾಗಿದೆ. ಈ ನಡುವೆ ಮಾರ್ಚ್ ತಿಂಗಳಿನಲ್ಲಿ ನಿಗದಿಯಾಗಿದ್ದ ರಾಜ್ಯಸಭೆ ಚುನಾವಣೆಯನ್ನುಕೇಂದ್ರ ಚುನಾವಣಾ ಆಯೋಗವು ಮುಂದೂಡಿತ್ತು. ಮಾರ್ಚ್ 26 ರಂದು ರಾಜ್ಯಸಭೆಯ 55 ಸ್ಥಾನಗಳಿಗೆ ಚುನಾವಣೆ ನಿಗದಿಯಾಗಿತ್ತು.

ಜೂನ್ 19ರಂದು 10 ರಾಜ್ಯಗಳ 24 ಸ್ಥಾನಗಳಿಗೆ ಚುನಾವಣೆ ಕರ್ನಾಟಕ, ಆಂಧ್ರಪ್ರದೇಶ, ಗುಜರಾತ್, ಮಧ್ಯಪ್ರದೇಶ, ಮಣಿಪುರ, ಜಾರ್ಖಂಡ್, ಮೇಘಾಲಯ, ಅರುಣಾಚಲ ಪ್ರದೇಶ, ಮಿಜೋರಾಂ ಹಾಗೂ ರಾಜಸ್ಥಾನ ರಾಜ್ಯಗಳಿಗೆ ಚುನಾವಣೆ ನಿಗದಿಯಾಗಿದೆ. ಜೂನ್ 19 ಸಂಜೆ 5 ಗಂಟೆಗೆ ಮತ ಎಣಿಕೆ ಕಾರ್ಯ ನಡೆಯಲಿದೆ. ಜೂನ್ 22ರೊಳಗೆ ಎಲ್ಲಾ ಚುನಾವಣೆ ಪ್ರಕ್ರಿಯೆಯನ್ನು ಮುಕ್ತಾಯಗೊಳಿಸಬೇಕಿದೆ.

ಅಂಧ್ರಪ್ರದೇಶ (4 ಸ್ಥಾನ), ಗುಜರಾತ್ (4), ಕರ್ನಾಟಕ (4), ಮಧ್ಯಪ್ರದೇಶ(3), ಜಾರ್ಖಂಡ್(2), ಮಣಿಪುರ(1), ಮೇಘಾಲಯ (1), ಅರುಣಾಚಲಪ್ರದೇಶ(1), ಮಿಜೋರಾಂ (1) ಹಾಗೂ ರಾಜಸ್ಥಾನದ (3) ಸ್ಥಾನಗಳಿಗೆ ಚುನಾವಣೆ ನಿಗದಿಯಾಗಿದೆ.

Read more at: https://kannada.oneindia.com/news/india/elections-for-rajya-sabha-seats-to-be-held-on-june-19-ec/articlecontent-pf159194-193520.html

Leave a Reply

Your email address will not be published. Required fields are marked *